ADVERTISEMENT

ಸುಭಾಷ್‌ ಚಂದ್ರ ಬೋಸ್ ಜನ್ಮ ದಿನ: ರಾಷ್ಟ್ರೀಯ ರಜಾದಿನ ಘೋಷಿಸುವಂತೆ ಮಮತಾ ಮನವಿ

ಪಿಟಿಐ
Published 23 ಜನವರಿ 2022, 11:19 IST
Last Updated 23 ಜನವರಿ 2022, 11:19 IST
ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೋಸ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು. ಪಿಟಿಐ ಚಿತ್ರ
ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೋಸ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು. ಪಿಟಿಐ ಚಿತ್ರ   

ಕೋಲ್ಕತ್ತ: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ನೇತಾಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ದಿನವನ್ನು ರಾಜ್ಯದಾದ್ಯಂತ ದೇಶ ನಾಯಕ ದಿವಸ ಎಂದು ಆಚರಿಸಲಾಗುವುದು ಎಂದು ಇದೇ ವೇಳೆ ಘೋಷಿಸಿದ ಅವರು, ನೇತಾಜಿ ಅವರ ಜನ್ಮ ದಿನವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ರಜಾ ದಿನವಾಗಿ ಘೋಷಿಸಬೇಕು ಎಂದು ಮನವಿ ಮಾಡಿದರು.

ಕ್ರಾಂತಿಕಾರಿ ನಾಯಕನ ಸ್ಮರಣಾರ್ಥ ರಾಜ್ಯ ಸರ್ಕಾರದ ಸಂಪೂರ್ಣ ವೆಚ್ಚದಲ್ಲಿ ಜೈ ಹಿಂದ್‌ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.