ಕೋಲ್ಕತ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿಯ ಅಂಗವಾಗಿ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಶ್ರದ್ಧಾಂಜಲಿ ಸಲ್ಲಿಸಿದರು.
ನೆಹರೂರವರು ದೂರ ದೃಷ್ಟಿಯುಳ್ಳ ನಾಯಕರಾಗಿದ್ದು, ಅವರ ಆಲೋಚನೆಗಳು ಸಂವಿಧಾನದ ಪರವಾಗಿದ್ದವು. ಅವರು 'ಆಧುನಿಕ ಭಾರತದ ದಾರ್ಶನಿಕ ಶಿಲ್ಪಿ' ಎಂದು ಹೊಗಳಿದರು.
'ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿಯಂದು ಅವರಿಗೆ ನಮನಗಳು' ಎಂದು ಬ್ಯಾನರ್ಜಿಯವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಹಲವು ಪ್ರಮುಖ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನಮನ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.