ADVERTISEMENT

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಜೊತೆ ಮಮತಾ ಮಾತುಕತೆ

ಪಿಟಿಐ
Published 4 ಆಗಸ್ಟ್ 2024, 16:20 IST
Last Updated 4 ಆಗಸ್ಟ್ 2024, 16:20 IST
<div class="paragraphs"><p>ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್</p></div>

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್

   

ಕೋಲ್ಕತ್ತ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಜೊತೆ ಮಾತುಕತೆ ನಡೆಸಲಾಗಿದೆ, ಜಾರ್ಖಂಡ್‌ನ ಅಣೆಕಟ್ಟುಗಳಿಂದ ನೀರು ಬಿಡುವ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಕೋರಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ.

ಜಾರ್ಖಂಡ್‌ನಿಂದ ನೀರು ಬಿಡುತ್ತಿರುವ ಕಾರಣ ಪಶ್ಚಿಮ ಬಂಗಾಳದಲ್ಲಿ ಕೆಲವೆಡೆ ಕೃತಕವಾಗಿ ಪ್ರವಾಹದಂತಹ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದು ಮಮತಾ ಅವರು ಹೇಳಿದ್ದಾರೆ.

ಆದರೆ ಮಳೆಯ ಪ್ರಮಾಣ ತಗ್ಗಿರುವ ಕಾರಣ ನೀರನ್ನು ಹೊರಬಿಡುವ ಪ್ರಮಾಣವು ಕಡಿಮೆ ಆಗುವ ನಿರೀಕ್ಷೆ ಇದೆ ಎಂದು ದಾಮೋದರ ವ್ಯಾಲಿ ಕಾರ್ಪೊರೇಷನ್ (ಡಿವಿಸಿ) ಹೇಳಿದೆ. ಇದು ಜಾರ್ಖಂಡ್‌ ಹಾಗೂ ಪಶ್ಚಿಮ ಬಂಗಾಳದಲ್ಲಿ ಹಲವು ಜಲವಿದ್ಯುತ್ ಉತ್ಪಾದನಾ ಘಟಕಗಳನ್ನು ನಿರ್ವಹಿಸುತ್ತಿದೆ. ಅಣೆಕಟ್ಟಿಯಿಂದ ಕೆಳಕ್ಕೆ ಇರುವ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಇಲ್ಲ ಎಂದು ಅದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.