ಪಟ್ನಾ: ಇಂಡಿಯಾ ಮೈತ್ರಿಕೂಟವನ್ನು ಮುನ್ನಡೆಸಲು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಅವಕಾಶ ನೀಡಬೇಕು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಮತಾ ಇಂಡಿಯಾ ಕೂಟದ ನಾಯಕಿಯಾದರೇ ಕಾಂಗ್ರೆಸ್‌ಗೆ ಯಾವುದೇ ತೊಂದರೆಯಾಗುವುದಿಲ್ಲ. ಮೈತ್ರಿ ಕೂಟಕ್ಕೆ ಲಾಭವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ವಿರುದ್ಧ ಹೋರಾಡಲು ಮತ್ತು ಇಂಡಿಯಾ ಮೈತ್ರಿಕೂಟ ಮುನ್ನಡೆಸಲು ನಾನು ಸಿದ್ಧ ಎಂದು ಮಮತಾ ಹೇಳಿದ ಕೆಲವು ದಿನಗಳ ಬಳಿಕ ಹಲವು ರಾಜಕೀಯ ಮುಖಂಡರು ಮಮತಾ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಎನ್‌ಸಿಪಿ (ಶರದ್) ನಾಯಕ ಶರದ್ ಪವಾರ್ ಕೂಡ ಮಮತಾ ಬ್ಯಾನರ್ಜಿ ಇಂಡಿಯಾ ಮೈತ್ರಿಕೂಟ ಮುನ್ನಡೆಸಲು ಅರ್ಹರು ಎಂದು ಹೇಳಿದ್ದರು.
ಮಮತಾ ಅವರನ್ನು ಕಾಂಗ್ರೆಸ್ ವಿರೋಧಿಸಿದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ, ಅವರಿಗೆ ಇಂಡಿಯಾ ಮೈತ್ರಿಕೂಟ ಮುನ್ನಡೆಸಲು ಅವಕಾಶ ನೀಡಬೇಕು ಎಂದು ಲಾಲು ಪ್ರಸಾದ್ ಯಾದವ್ ಒತ್ತಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.