ADVERTISEMENT

ವಾಘಿನಿ ಚಿತ್ರ ನನ್ನದಲ್ಲ: ಮಮತಾ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 17:06 IST
Last Updated 24 ಏಪ್ರಿಲ್ 2019, 17:06 IST
   

ಕೋಲ್ಕತ್ತ:‘ವಾಘಿನಿ–ಬೆಂಗಾಲ್ ಟೈಗ್ರೆಸ್‌’ ತಮ್ಮ ಜೀವನಧಾರಿತ ಚಲನಚಿತ್ರ ಎನ್ನುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

ಸಾಮಾನ್ಯ ಬಾಲಕಿಯೊಬ್ಬಳು ರಾಜ್ಯದ ಮುಖ್ಯಮಂತ್ರಿಯಾಗುವ ಕಥೆಯನ್ನು ಈ ಚಿತ್ರ ಹೊಂದಿದೆ. ಈ ಚಿತ್ರವು ಮಮತಾ ಬ್ಯಾನರ್ಜಿ ಅವರ ಜೀವನಚರಿತ್ರೆಯನ್ನು ಆಧರಿಸಿದೆ. ಹೀಗಾಗಿ ಚಿತ್ರ ಬಿಡುಗಡೆಯಾಗದಂತೆ ನಿರ್ಬಂಧ ಹೇರಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಆ ಚಿತ್ರದ ಟ್ರೈಲರ್‌ ಅನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆಯುವಂತೆ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾ ಅಧಿಕಾರಿಗೆ ಚುನಾವಣಾ ಆಯೋಗವು ಸೂಚಿಸಿದೆ.

ADVERTISEMENT

ಇದರ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸಹ ಟ್ವೀಟ್ ಮಾಡಿದ್ದಾರೆ. ‘ಯಾವ ಚಿತ್ರಕ್ಕೂ ನನಗೂ ಸಂಬಂಧವಿಲ್ಲ. ಯಾರೋ ಯುವಜನರು ಕಥೆ ಸಂಗ್ರಹಿಸಿ, ಚಿತ್ರ ನಿರ್ಮಿಸಿದ್ದಾರೆ. ಅದಕ್ಕೆ ನಾನು ಹೇಗೆ ಹೊಣೆ ಆಗುತ್ತೇನೆ. ನಾನು ನರೇಂದ್ರ ಮೋದಿ ಅಲ್ಲ. ಆ ಚಿತ್ರಕ್ಕೂ ನನಗೂ ಸಂಬಂಧವಿದೆ ಎನ್ನುತ್ತಿರುವವರು ಮಾನನಷ್ಟ ಮೊಕದ್ದಮೆ ಎದುರಿಸಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.