ADVERTISEMENT

ಎಸ್‌ಐಆರ್ ಪ್ರಕ್ರಿಯೆಯನ್ನು 'ಮತಬಂಧನ' ಎಂದ ಮಮತಾ ಬ್ಯಾನರ್ಜಿ

ಪಿಟಿಐ
Published 10 ನವೆಂಬರ್ 2025, 13:21 IST
Last Updated 10 ನವೆಂಬರ್ 2025, 13:21 IST
<div class="paragraphs"><p>ಮಮತಾ ಬ್ಯಾನರ್ಜಿ</p></div>

ಮಮತಾ ಬ್ಯಾನರ್ಜಿ

   

– ಪಿಟಿಐ ಚಿತ್ರ

ಕೋಲ್ಕತ್ತ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು 'ಮತಬಂಧನ‘ ಎಂದು ಕಿಡಿಕಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗ ಈ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುತ್ತಿರುವ ಉದ್ದೇಶ ಅರ್ಥವಾಗುತ್ತಿಲ್ಲ. ಎರಡು ಅಥವಾ ಮೂರು ತಿಂಗಳಿನಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಸ್‌ಐಆರ್ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡುತ್ತಿದೆ. ಇದು ತುರ್ತು ಪರಿಸ್ಥಿತಿಯ ಮತ್ತೊಂದು ರೂಪ ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಎಸ್‌ಐಆರ್ ವಿರುದ್ಧ ಮಾತನಾಡಿದರೆ ಬಿಜೆಪಿ ನನನ್ನು ಜೈಲಿಗೆ ಕಳುಹಿಸಬಹುದು, ನನ್ನ ಧ್ವನಿಯನ್ನು ಹತ್ತಿಕ್ಕಬಹುದು. ಆದರೆ ಜನರ ಮತದಾನದ ಹಕ್ಕನ್ನು ಹತ್ತಿಕ್ಕಬೇಡಿ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‌ಟಿ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಸರಕು ಮತ್ತು ಸೇವಾ ತೆರಿಗೆಯನ್ನು(ಜಿಎಸ್‌ಟಿ) ಅನ್ನು ಇದೊಂದು ಪ್ರಮಾದ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.