ADVERTISEMENT

ಬೀದಿ ನಾಯಿಗೆ ನೈಂಟಿ ಕುಡಿಸಿದ ಅಸಾಮಿಗೆ ಜೈಲು ಗ್ಯಾರಂಟಿ

ಪಿಟಿಐ
Published 5 ಜನವರಿ 2026, 6:48 IST
Last Updated 5 ಜನವರಿ 2026, 6:48 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಬಾಗ್ಪತ್: ಉತ್ತರ ಪ್ರದೇಶದಲ್ಲಿ ಬೀದಿ ನಾಯಿಗೆ ಬಲವಂತವಾಗಿ ಮದ್ಯ ಕುಡಿಸಿದ ಆರೋಪದ ಮೇಲೆ ಯುವಕನೊಬ್ಬ ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಆರೋಪಿಯು ಬೀದಿ ನಾಯಿಗೆ ಮದ್ಯ ಕುಡಿಸುತ್ತಿರುವ ವಿಡಿಯೊವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಬಾಗ್ಪತ್ ಸಾಮಾಜಿಕ ಮಾಧ್ಯಮ ಸೆಲ್ ಹಾಗೂ ರಾಮಲಾ ಪೊಲೀಸ್‌ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ADVERTISEMENT

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಅವನನ್ನು ಜಿತೇಂದ್ರ ಅಲಿಯಾಸ್ ಬಲ್ಲಂ ಎಂದು ಗುರುತಿಸಲಾಗಿದೆ.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಚಾರಣೆಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.