ADVERTISEMENT

ಹರಿಯಾಣ: ನಿಷೇಧಿತ ವಿದೇಶಿ ಇ-ಸಿಗರೇಟ್ ಮಾರುತ್ತಿದ್ದ ವ್ಯಕ್ತಿ ಬಂಧನ

ಐಎಎನ್ಎಸ್
Published 16 ಮಾರ್ಚ್ 2023, 15:43 IST
Last Updated 16 ಮಾರ್ಚ್ 2023, 15:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗುರುಗ್ರಾಮ್(ಹರಿಯಾಣ): ನಿಷೇಧಿತ ವಿದೇಶಿ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಸುಶಾಂತ್ ಲೋಕ್ ಫೇಸ್-1 ಪ್ರದೇಶದ ವ್ಯಾಪಾರ ಕೇಂದ್ರದಲ್ಲಿರುವ ಅಂಗಡಿ ಮೇಲೆ ಡ್ರಗ್ ಕಂಟ್ರೋಲರ್ ಇಲಾಖೆ ಮತ್ತು ಸ್ಥಳೀಯ ಪೊಲೀಸರನ್ನೊಳಗೊಂಡ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ₹7 ರಿಂದ ₹10 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ದೆಹಲಿಯ ಖಾನ್‌ಪುರ ನಿವಾಸಿ ರಾಜೇಶ್(50) ಎಂದು ಗುರುತಿಸಲಾಗಿದೆ.

ADVERTISEMENT

ವಿವಿಧ ಬ್ರಾಂಡ್‌ಗಳ ಇ-ಸಿಗರೇಟ್‌ಗಳ ಬೃಹತ್ ಪ್ಯಾಕೆಟ್‌ಗಳು ಮತ್ತು ವಿದೇಶಿ ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

‘ಅನುಮತಿ ಇಲ್ಲದೆ ಅಕ್ರಮವಾಗಿ ಇ-ಸಿಗರೇಟ್ ಮತ್ತು ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನಿಷೇಧಿತ ಸಿಗರೇಟ್‌ಗಳ ಸಮೇತ ಆರೋಪಿಯನ್ನು ಬಂಧಿಸಿದ್ದೇವೆ’ ಎಂದು ಅಧಿಕಾರಿ ಹರೀಶ್ ಹೇಳಿದ್ದಾರೆ.

ಆರೋಪಿಯು ದೆಹಲಿಯಿಂದ ನಿಷೇಧಿತ ಸಿಗರೇಟ್‌ಗಳನ್ನು ತಂದು ಕಳೆದ ಆರು ತಿಂಗಳಿನಿಂದ ಅಕ್ರಮ ದಂಧೆ ನಡೆಸುತ್ತಿದ್ದನು. ಅಂಗಡಿಗೆ ಮಾಸಿಕ ₹25 ಸಾವಿರ ಬಾಡಿಗೆ ನೀಡುತ್ತಿದ್ದರು. ಈ ಪ್ರಕರಣ ಸಂಬಂಧ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಮತ್ತು ಎಲೆಕ್ಟ್ರಾನಿಕ್ ಸಿಗರೇಟ್ ನಿಷೇಧ ಕಾಯ್ದೆಯಡಿ ರಾಜೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.