ADVERTISEMENT

ಶಿವಸೇನಾ ಮುಖ್ಯಸ್ಥರಿಗೆ ಬೆದರಿಕೆ; ಬಂಧನ

ಪಿಟಿಐ
Published 11 ಸೆಪ್ಟೆಂಬರ್ 2020, 10:47 IST
Last Updated 11 ಸೆಪ್ಟೆಂಬರ್ 2020, 10:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತಾ: ಬಾಲಿವುಡ್ ನಟಿ ಕಂಗನಾ ರನೌತ್‌ ಅವರ ಅಭಿಮಾನಿ ಎಂದು ಹೇಳಿಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಶಿವಸೇನಾ ಮುಖ್ಯಸ್ಥ ಸಂಜಯ್ರಾವುತ್ ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಇಲ್ಲಿನ ಟೊಲ್ಲಿಗುಂಜೆ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನ ಹೆಸರು ಪಾಲಾಶ್ ಘೋಷ್ (24). ಕೋಲ್ಕತ್ತಾ ಪೊಲೀಸರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು, ಕೋಲ್ಕತ್ತಾದ ಟೊಲ್ಲಿಗುಂಜೆ ಪ್ರದೇಶದಲ್ಲಿರುವ ಅವರ ಮನೆಯಲ್ಲೇ ಘೋಷ್‌ನನ್ನು ಬಂಧಿಸಿದ್ದಾರೆ.

ಬಂಧಿತ ಘೋಷ್, ರಾವುತ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ‘ಪರಿಣಾಮ ನೆಟ್ಟಗಿರುವುದಿಲ್ಲ‘ ಎಂದು ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ‘ಬಂಧಿತನನ್ನು ಪೊಲೀಸರು ಮುಂಬೈ ನಗರದ ನ್ಯಾಯಾಲಯದಲ್ಲಿ ಹಾಜರುಪಡಿಸಲಿದ್ದಾರೆ‘ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.