ಸಾಂದರ್ಭಿಕ ಚಿತ್ರ
ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಡ್ರಗ್ಸ್ ಖರೀದಿಸಲು ಹಣ ನೀಡದ ತಾಯಿಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 6ರ ಬೆಳಿಗ್ಗೆ ಆರೋಪಿಯು ತಾಯಿಯ ಬಳಿ ಡ್ರಗ್ಸ್ ಖರೀದಿಸಲು ಹಣ ಕೇಳಿದ್ದು, ತಾಯಿ ಹಣ ಕೊಡಲು ನಿರಾಕರಿಸಿದ್ದಾರೆ. ಈ ವೇಳೆ ಅವರನ್ನು ಒದ್ದು ರಾಡ್‌ನಿಂದ ಥಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ದೂರಿನ ಆಧಾರದ ಮೇಲೆ, ಬದ್ಲಾಪುರ ಪೊಲೀಸರು ಶನಿವಾರ 22 ವರ್ಷದ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆಯ ಕಣ್ಣಿಗೆ ಗಾಯಗಳಾಗಿವೆ. ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.