ADVERTISEMENT

ಹಿಮಾಚಲ ಪ್ರದೇಶ: 42 ಕೆ.ಜಿ ಚರಸ್‌ ವಶ; ಒಬ್ಬನ ಬಂಧನ

ಪಿಟಿಐ
Published 12 ಜೂನ್ 2020, 5:35 IST
Last Updated 12 ಜೂನ್ 2020, 5:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿಮ್ಲಾ : ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ 42 ಕೆ.ಜಿ ಚರಸ್‌ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿದ್ದ ಚರಸ್‌ ಅನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ 17 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಚರಸ್‌ ಅನ್ನು ಕುಲ್ಲು ಜಿಲ್ಲಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವುದಾಗಿ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್‌ ಸಿಂಗ್‌ ಹೇಳಿದ್ದಾರೆ.

ಬಂಜಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಜಗದೀಶ್ ನೇತೃತ್ವದ ತಂಡ ಫಾಗು ಸೇತುವೆ ಬಳಿ ತಪಾಸಣೆ ನಡೆಸುತ್ತಿದ್ದಾಗ, ಮಂಡಿ ಜಿಲ್ಲೆಯ ರೆವಾಲರ್ಸ್‌ನ ಚಾಲಕ ಲೀಲಾಧರ್ ಅವರ ವಾಹನದಲ್ಲಿ ಚರಸ್‌ ಪತ್ತೆಯಾಗಿದೆ. ಪೊಲೀಸರು ಚರಸ್‌ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ಎಸ್‌.ಪಿ ತಿಳಿಸಿದ್ದಾರೆ.

ADVERTISEMENT

ಮಾದಕ ದ್ರವ್ಯ ಮತ್ತು ಮಾನಸಿಕ ವ್ಯಸನ ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್‌) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.