ADVERTISEMENT

ಮಹಾರಾಷ್ಟ್ರ: ಒಬಿಸಿ ಕೋಟಾ ಕಳೆದುಕೊಂಡಿದ್ದಕ್ಕೆ ಆತ್ಮ‌ಹತ್ಯೆಗೆ ಶರಣಾದ ವ್ಯಕ್ತಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 15:58 IST
Last Updated 25 ಸೆಪ್ಟೆಂಬರ್ 2025, 15:58 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೀಡ್‌(ಮಹಾರಾಷ್ಟ್ರ): ಒಬಿಸಿ ಕೋಟಾ ಕಳೆದುಕೊಂಡ ಕಾರಣಕ್ಕೆ ಮನನೊಂದು 34 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರ ಬೀಡ್‌ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಸಾಲ್‌ ಗ್ರಾಮದ ನಿವಾಸಿಯಾಗಿರುವ ರಾಹುಲ್ ಧ್ಯಾನೇಶ್ವರ್ ಪತಂಗೆ ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಂಡೇಶ್ವರಿದೇವಿ ದೇವಸ್ಥಾನದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪತಂಗೆ, ಒಬಿಸಿ ಕೋಟಾ ಕಳೆದುಕೊಂಡಿದ್ದಕ್ಕೆ ಅಸಮಾಧಾನಗೊಂಡಿದ್ದರು. ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಪತಂಗೆ ಅವರಿಗೆ ತಾಯಿ, ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.