ಸಲ್ಮಾನ್ ಖಾನ್
ಮುಂಬೈ: ಸಿನಿಮಾ ಚಿತ್ರೀಕರಣ ನಡೆಯುವ ಸೆಟ್‌ಗೆ ಬಂದು ಸಲ್ಮಾನ್ ಖಾನ್ ಅಂಗರಕ್ಷಕನಿಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬೆದರಿಕೆ ಹಾಕಿದ ಕಾರಣ, ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
‘ಮುಂಬೈನ ಶಿವಾಜಿ ಪಾರ್ಕ್ ಬಳಿ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ಚಿತ್ರೀಕರಣಕ್ಕೆ ಸೆಟ್ ಹಾಕಲಾಗಿತ್ತು. ಈ ವೇಳೆ ಜ್ಯೂನಿಯರ್ ಕಲಾವಿದ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಸೆಟ್ ಒಳಗೆ ಪ್ರವೇಶಿಸಿದ್ದ. ಈ ವೇಳೆ ಅಂಗರಕ್ಷಕರೊಬ್ಬರು ಆತನನ್ನು ತಡೆದಿದ್ದಾರೆ. ಇಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಆತ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರನ್ನು ಹೇಳಿ ಬೆದರಿಕೆ ಹಾಕಿದ್ದಾನೆ. ವಾಗ್ವದ ಗಮನಿಸಿದ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ’ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆಯುವ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರು ಸೆಟ್‌ನಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.