ADVERTISEMENT

ದೆಹಲಿ ಸಿಎಂ ರೇಖಾ ಗುಪ್ತಾಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ ​​

ಪಿಟಿಐ
Published 7 ಜೂನ್ 2025, 11:18 IST
Last Updated 7 ಜೂನ್ 2025, 11:18 IST
   

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ಶ್ಲೋಕ್ ತ್ರಿಪಾಠಿ ಎಂದು ಗುರುತಿಸಲಾಗಿದೆ. ವಂಚಕನಾಗಿರುವ ಆರೋಪಿ ಆಗಾಗ ತನ್ನ ಗುರುತನ್ನು ಬದಲಾಯಿಸುತ್ತಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಆರೋಪಿಯು ಉತ್ತರ ಪ್ರದೇಶದ ನೆರೆಯ ಗಾಜಿಯಾಬಾದ್‌ನಲ್ಲಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಗಾಜಿಯಾಬಾದ್ ಪೊಲೀಸರು ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಪಂಚವಟಿ ಕಾಲೋನಿಗೆ ತಂಡವನ್ನು ಕಳುಹಿಸಿದ್ದರು. ಪಂಚವಟಿ ಕಾಲೋನಿಯಿಂದಲೇ ಆರೋಪಿ ಕರೆ ಮಾಡಿದ್ದ ಎಂದು ಗಾಜಿಯಾಬಾದ್‌ನ ಸಹಾಯಕ ಪೊಲೀಸ್ ಆಯುಕ್ತ ರಿತೇಶ್ ತ್ರಿಪಾಠಿ ತಿಳಿಸಿದ್ದಾರೆ.

ADVERTISEMENT

ಗಾಜಿಯಾಬಾದ್ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ಆತನನ್ನು ಬಂಧಿಸಿದ್ದಾರೆ. ನಗರದ ವಾಯವ್ಯ ಭಾಗದಲ್ಲಿರುವ ದೆಹಲಿ ಪೊಲೀಸರ ವಿಶೇಷ ಘಟಕದ ಕಚೇರಿಯಲ್ಲಿ ಆತನನ್ನು ವಿಚಾರಣೆ ನಡೆಸಲಾಗುತ್ತಿದೆ.

ವಿಚಾರಣೆಯ ಸಮಯದಲ್ಲಿ, ಆರೋಪಿ, ಕರೆ ಮಾಡಿದಾಗ ತಾನು ಪಾನಮತ್ತ ಸ್ಥಿತಿಯಲ್ಲಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.