ADVERTISEMENT

ಮಹಾರಾಷ್ಟ್ರ | ಪೊಲೀಸರ ಸೋಗಿನಲ್ಲಿ ಬೈಕ್‌ ಕಳ್ಳತನ, ವ್ಯಕ್ತಿ ಬಂಧನ

ಪಿಟಿಐ
Published 18 ಮಾರ್ಚ್ 2023, 10:47 IST
Last Updated 18 ಮಾರ್ಚ್ 2023, 10:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪೊಲೀಸರ ವೇಷದಲ್ಲಿ ಬೈಕ್ ಅಪಹರಿಸಿದ 37 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಲ್ಲಿನ ಕಲ್ಯಾಣ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಬೈಕರ್ ಸವಾರನನ್ನು ಅಡ್ಡಗಟ್ಟಿದ ಆರೋಪಿ ಪೊಲೀಸರಂತೆ ನಟಿಸಿ, ಅವರ ವಸ್ತುಗಳನ್ನು ದೋಚಿದ್ದಾರೆ. ದ್ವಿಚಕ್ರ ವಾಹನವನ್ನು ಕಂದು ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಹೇಂದ್ರ ದೇಶಮುಖ್ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾರೆ. ಈ ವ್ಯಕ್ತಿ ಈ ಹಿಂದೆಯೂ ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದರೇ ಎಂಬುದನ್ನು ಕಂಡು ಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ದೇಶಮುಖ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.