ADVERTISEMENT

ಪುಣೆಯಲ್ಲಿ ಎಮ್ಮೆ ಕರುವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ: ವ್ಯಕ್ತಿ ಬಂಧನ

ಪಿಟಿಐ
Published 29 ಅಕ್ಟೋಬರ್ 2022, 9:26 IST
Last Updated 29 ಅಕ್ಟೋಬರ್ 2022, 9:26 IST
   

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಎಮ್ಮೆ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ಮಾಡಿದ 38 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನಗರದ ಡೆಕ್ಕನ್ ಪ್ರದೇಶದಲ್ಲಿ ಶುಕ್ರವಾರ ಈ ಕೃತ್ಯ ನಡೆದಿರುವುದು ವರದಿಯಾಗಿದೆ.

ನೇಪಾಳದಿಂದ ಬಂದು ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಡೆಕ್ಕನ್ ಪ್ರದೇಶದಲ್ಲಿ ಮೇಯಲು ಬಂದಿದ್ದ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನು ನೋಡಿದ ಸ್ಥಳೀಯರು ವ್ಯಕ್ತಿಯನ್ನು ಪ್ರಜ್ಞೆ ತಪ್ಪುವ ಹಾಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ADVERTISEMENT

ಬಳಿಕ ದೂರು ದಾಖಲಿಸಿಕೊಂಡಿರುವ ಪೊಲೀಸರು ವ್ಯಕ್ತಿಯ ಮೇಲೆ ಅನೈಸರ್ಗಿಕ ಲೈಂಗಿಕ ಕ್ರಿಯೆ ಪ್ರಕರಣ ಹಾಗೂ ಪ್ರಾಣಿಗಳ ಮೇಲಿನ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.