ADVERTISEMENT

ಠಾಣೆ | 13 ವರ್ಷದ ಕ್ಯಾನ್ಸರ್‌ ಪೀಡಿತ ಬಾಲಕಿ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ

ಪಿಟಿಐ
Published 5 ಏಪ್ರಿಲ್ 2025, 10:32 IST
Last Updated 5 ಏಪ್ರಿಲ್ 2025, 10:32 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 13 ವರ್ಷದ ಕ್ಯಾನ್ಸರ್‌ ‍ಪೀಡಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿರುವ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

29 ವರ್ಷದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎರಡು ತಿಂಗಳ ಹಿಂದೆ ಆರೋಪಿಯು, ಬಾಲಕಿಯ ಕುಟುಂಬದವರಿಗೆ ಬದ್ಲಾಪುರದಲ್ಲಿ ಬಾಡಿಗೆ ಮನೆ ವ್ಯವಸ್ಥೆ ಮಾಡಿದ್ದು, ಆಕೆಯ ಚಿಕಿತ್ಸೆಗೂ ಸಹಾಯ ಮಾಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿರುವ ವೇಳೆ ಆರೋಪಿಯು ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನೆರೆಯ ಮುಂಬೈನ ಆಸ್ಪತ್ರೆಯೊಂದರಲ್ಲಿ ಬಾಲಕಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ ಎಂದು ಸಹಾಯಕ ಪೊಲೀಸ್‌ ಆಯುಕ್ತ ಶೈಲೇಶ್‌ ಕಾಳೆ ಹೇಳಿದ್ದಾರೆ.

ಕೃತ್ಯದ ಕುರಿತು ಪೋಕ್ಸೊ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.