
ಪ್ರಜಾವಾಣಿ ವಾರ್ತೆ
ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಜಿಲೆಟಿನ್ ಕಡ್ಡಿ ಮತ್ತು ತಂತಿಗಳ ರೂಪದಲ್ಲಿದ್ದ 9.75 ಕೆ.ಜಿ.ಯಷ್ಟು ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಪಡೆಗಳು ಬುಧವಾರ ಬಂಧಿಸಿವೆ.
ಖಚಿತ ಮಾಹಿತಿ ಮೇರೆಗೆ ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ, ಆತನಿಂದ 78 ಜಿಲಟಿನ್ ಕಡ್ಡಿಗಳು ಮತ್ತು 275 ಮೀಟರ್ ತಂತಿಯನ್ನು ವಶಪಡಿಸಿಕೊಂಡಿರುವುದಾಗಿ ರಕ್ಷಣಾ ಇಲಾಖೆಯ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಕಿಸ್ತ್ವಾರ್ ಜಿಲ್ಲೆಯ ಜಲವಿದ್ಯುತ್ ಯೋಜನಾ ಪ್ರದೇಶ ಸಮೀಪದ ಅಡಗುದಾಣವೊಂದರಿಂದ ಇದೇ ರೀತಿಯ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.