ಪ್ರಾತಿನಿಧಿಕ ಚಿತ್ರ
ಶ್ರೀನಗರ: ಮಿನಿ ಬಸ್ ಕಮರಿಗೆ ಉರುಳಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹದಿನೇಳು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದಿದೆ.
ರಜೌರಿ ಜಿಲ್ಲೆಯ ಸರ್ಯೋ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮಿನಿ ಬಸ್ ತೆರ್ಯಾತ್‌ನಿಂದ ಪೌನಿ ಕಡೆಗೆ ಹೋಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.