ಘಟನಾ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು.
ಪಟ್ನಾ: ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಯುವಕನೊಬ್ಬ 16 ವರ್ಷದ ಬಾಲಕಿ ಮತ್ತು ಆಕೆಯ ತಂದೆಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂದೂಕುಧಾರಿಯನ್ನು ಅಮನ್ ಕುಮಾರ್ ಎಂದು ಗುರುತಿಸಲಾಗಿದೆ. 2 ಮತ್ತು 3ನೇ ಪ್ಲಾಟ್‌ಫಾರ್ಮ್‌ಗಳನ್ನು ಸಂಪರ್ಕಿಸುವ ಪಾದಚಾರಿ ಸೇತುವೆ ಮೇಲೆ ಈ ಘಟನೆ ನಡೆದಿದೆ ಎಂದು ಭೋಜ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ತಿಳಿಸಿದ್ದಾರೆ.
ಬಾಲಕಿ ತಂದೆಯೊಂದಿಗೆ ದೆಹಲಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಳು. ಆರೋಪಿ ಅಮನ್ ಏಕಾಏಕಿ ಬಾಲಕಿ ಮತ್ತು ಆಕೆಯ ತಂದೆ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರಾಜ್ ಮಾಹಿತಿ ನೀಡಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದಾಗ್ಯೂ, ಪ್ರೇಮ ವೈಫಲ್ಯದಿಂದಾಗಿ ಆರೋಪಿ ಕೃತ್ಯ ಎಸಗಿರುವ ಸಾಧ್ಯತೆಯೂ ಇದೆ. ಘಟನೆ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.