ADVERTISEMENT

ತಮಿಳುನಾಡು: ಹೆಂಡತಿ, ನಾಲ್ವರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಪಿಟಿಐ
Published 13 ಡಿಸೆಂಬರ್ 2022, 7:25 IST
Last Updated 13 ಡಿಸೆಂಬರ್ 2022, 7:25 IST
   

ತಿರುವಣಮಲೈ: ವ್ಯಕ್ತಿಯೊಬ್ಬ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ನಡೆದಿದೆ. ಮೃತರಲ್ಲಿ ಇಬ್ಬರು ಹದಿಹರೆಯದ ಹೆಣ್ಣುಮಕ್ಕಳಿದ್ದರು.

ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ 9 ವರ್ಷದ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಟುಂಬವನ್ನೇ ಕೊಂದ ವ್ಯಕ್ತಿಯನ್ನು 45 ವರ್ಷದ ಪಳನಿಸ್ವಾಮಿ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ADVERTISEMENT

ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ಮನೆಯ ಬಾಗಿಲು ತೆರೆದಾಗ ಪಳನಿಸ್ವಾಮಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು, 37 ವರ್ಷದ ಹೆಂಡತಿ, ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಮಗ ಸಾವಿಗೀಡಾಗಿರುವುದು ಕಂಡುಬಂದಿದೆ. ಗಾಯಗೊಂಡಿದ್ದ 9 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.