ADVERTISEMENT

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ ರಕ್ತಸ್ರಾವದಿಂದ ಸಾವು

ಉತ್ತರಪ್ರದೇಶದ ಉನ್ನಾವೊದಲ್ಲಿ ನಡೆದ ದುರ್ಘಟನೆ

ಪಿಟಿಐ
Published 11 ಮಾರ್ಚ್ 2020, 21:32 IST
Last Updated 11 ಮಾರ್ಚ್ 2020, 21:32 IST
   

ಉನ್ನಾವೊ (ಉತ್ತರಪ್ರದೇಶ): ಅಪರಿಚಿತನಿಂದ ಅತ್ಯಾಚಾರ ಕ್ಕೀಡಾದ ಒಂಬತ್ತು ವರ್ಷದ ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಉನ್ನಾವೊದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರದ ನಂತರ ಬಾಲಕಿಯ ಕತ್ತುಹಿಸುಕಿ ಸಾಯಿಸಲು ಯತ್ನಿಸಿದ್ದ ಆರೋಪಿ, ಬಾಲಕಿ ಸತ್ತಿದ್ದಾಳೆಂದು ಭಾವಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

‘ಹೋಳಿ ಹಬ್ಬದ ದಿನದಂದು ಅತ್ಯಾಚಾರ ಘಟನೆ ನಡೆದಿದ್ದು, ಬಾಲಕಿ ಪ್ರಜ್ಞಾಹೀನಳಾಗಿ ಬಿದ್ದಿದ್ದನ್ನು ಗಮನಿಸಿದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವದಿಂದಾಗಿ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಕಾನ್ಪುರದ ಹ್ಯಾಲೆಟ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ’ ಎಂದು ಭಾಗಾಪುರದ ಪೊಲೀಸ್ ಅಧಿಕಾರಿ ಅಂಜನಿ ರೈ ತಿಳಿಸಿದ್ದಾರೆ.

ADVERTISEMENT

ಘಟನೆ ಕುರಿತು ಬಾಲಕಿಯ ಕುಟುಂಬ ಪ್ರಕರಣ ದಾಖಲಿಸಿದೆ.

ಪ್ರಿಯಾಂಕಾ ಟ್ವೀಟ್: ‘ಬಿಜೆಪಿ ಆಡಳಿತಾವಧಿ‌ಯಲ್ಲಿಉತ್ತರಪ್ರದೇಶದಲ್ಲಿ ಮಕ್ಕಳ ಮೇಲೆ ಹೆಚ್ಚಿನ ಅಪರಾಧ ಪ್ರಕರಣಗಳು ನಡೆದಿವೆ. ಇಂಥ ಘಟನೆಗಳು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ. ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾಳೆ. ಇದು ಎಷ್ಟು ದಿನ ಮುಂದುವರಿಯುತ್ತದೆ?’ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.