
ಪಿಟಿಐ
ಸಾಂದರ್ಭಿಕ ಚಿತ್ರ
ಬಹರೈಚ್: 50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಇಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನ್‌ಪರ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೃಂದ ಶುಕ್ಲಾ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ, ಆರೋಪಿಯ ಮೇಲೆ ಪೋಕ್ಸೊ ಹಾಗೂ ಐಪಿಸಿಯ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.