ಭದೋಹಿ (ಉತ್ತರ ಪ್ರದೇಶ): ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಲಾಗಿದೆ.
ಕೇಂದ್ರೀಯ ಸಂಸ್ಥೆಗಳ ವಿಚಾರಣೆಯ ನಂತರ ರಾಮ್ ಶಂಕರ್ ಬಿಂದ್ (20) ಅವರನ್ನು ಭಾನುವಾರ ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ರಾಮ್ ಶುಕ್ರವಾರ ಬೆಳಿಗ್ಗೆ ಸಂಸತ್ ಭವನದ ಆವರಣ ಗೋಡೆ ಏರಲು ಯತ್ನಿಸಿದ್ದರು. ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಂಧನದ ವೇಳೆ ಅವರು ಮಾನಸಿಕ ಅಸ್ವಸ್ಥನಂತೆ ಕಂಡುಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆವರಣ ಗೋಡೆಯ ಬದಿಯಲ್ಲಿರುವ ಮರವನ್ನು ಹತ್ತುವ ಮೂಲಕ ರಾಮ್ ಸಂಸತ್ ಭವನವನ್ನು ಪ್ರವೇಶಿಸಲು ಯತ್ನಿಸಿದ್ದರು. ಕೃತ್ಯದ ಹಿಂದಿನ ಕಾರಣ ತಿಳಿಯಲು ಗುಪ್ತಚರ ವಿಭಾಗ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕವು ಅವರನ್ನು ವಿಚಾರಣೆಗೆ ಒಳಪಡಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.