ADVERTISEMENT

ಕೊರೊನಾ: ತಬ್ಲೀಗಿ ಜಮಾತ್ ಸದಸ್ಯರನ್ನು ಟೀಕಿಸಿದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 13:40 IST
Last Updated 5 ಏಪ್ರಿಲ್ 2020, 13:40 IST
ಉತ್ತರ ಪ್ರದೇಶದ ಪೊಲೀಸರು  (ಸಂಗ್ರಹ ಚಿತ್ರ)
ಉತ್ತರ ಪ್ರದೇಶದ ಪೊಲೀಸರು (ಸಂಗ್ರಹ ಚಿತ್ರ)   

ಪ್ರಯಾಗ್‌ರಾಜ್ (ಉತ್ತರಪ್ರದೇಶ):ತಬ್ಲೀಗಿ ಜಮಾತ್ ಸದಸ್ಯರು ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಹತ್ಯೆಯಾದ ವ್ಯಕ್ತಿಯವನ್ನು ಲೌತಾನ್ ನಿಶಾದ್ (30) ಎಂದು ಗುರುತಿಸಲಾಗಿದೆ. ಭಾನುವಾರ ಪ್ರಯಾಗ್‌ರಾಜ್ ಜಿಲ್ಲೆಯಿಂದ ಸುಮಾರು 200 ಕಿಮೀ ದೂರದಲ್ಲಿರುವ ಮೋಧಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಜನರ ಮಧ್ಯೆ ಕೊರೊನಾ ವಿಷಯ ಚರ್ಚೆಯಾಗಿದೆ. ಆ ವೇಳೆ ಲೌತಾನ್, ತಬ್ಲೀಗಿ ಜಮಾತ್ ಸದಸ್ಯರು ವೈರಸ್ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದು ಇದರಿಂದ ಕೋಪಗೊಂಡ ಮೊಹಮ್ಮದ್ ಸೋನಾ ಎಂಬ ವ್ಯಕ್ತಿ ಗುಂಡಿಕ್ಕಿಲೌತಾನ್‌ನ್ನು ಹತ್ಯೆ ಮಾಡಿದ್ದಾನೆ.

ಮೊಹಮ್ಮದ್ ವಿರುದ್ಧ ರಾಷ್ಟ್ರೀಯ ಸುರಕ್ಷಾ ಕಾಯ್ದೆ ಮತ್ತು ಭಾರತ ದಂಡ ಸಂಹಿತೆಯ ಕಾಯ್ದೆಯ ವಿವಿಧ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ಹತ್ಯೆಗೀಡಾದ ವ್ಯಕ್ತಿಯ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 5 ಲಕ್ಷ ಪರಿಹಾರಧನ ಘೋಷಿಸಿದೆ.
ಪ್ರಸ್ತುತ ಗ್ರಾಮದಲ್ಲಿ ಜನರು ಆತಂಕಕ್ಕೀಡಾಗಿದ್ದು ಜನರ ಸುರಕ್ಷೆಗಾಗಿ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.