ADVERTISEMENT

ಮೊಬೈಲ್‌ ಸಂಖ್ಯೆ ಬ್ಲಾಕ್‌ ಮಾಡಿದ್ದಕ್ಕೆ ಯುವತಿಗೆ 13 ಬಾರಿ ಚಾಕುವಿನಿಂದ ಇರಿದ!

ಪಿಟಿಐ
Published 14 ಅಕ್ಟೋಬರ್ 2023, 8:12 IST
Last Updated 14 ಅಕ್ಟೋಬರ್ 2023, 8:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಮೊಬೈಲ್‌ ಸಂಖ್ಯೆಯನ್ನು ಬ್ಲಾಕ್‌ ಮಾಡಿದ ಕಾರಣ ಯುವತಿಗೆ 27 ವರ್ಷದ ವ್ಯಕ್ತಿ ಸುಮಾರು 13 ಬಾರಿ ಚಾಕುವಿನಿಂದ ಇರಿದಿರುವ ಘಟನೆ ದಕ್ಷಿಣ ದೆಹಲಿಯ ಲಾಡೋ ಸರಾಯ್‌ ಪ್ರದೇಶದಲ್ಲಿ ನಡೆದಿದೆ.

ಮಹಿಳೆಯ ಕುಟುಂಬದವರು ಯುವಕನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ದು, ಮಹಿಳೆಯು ಯುವಕನ ಮೊಬೈಲ್‌ ಸಂಖ್ಯೆಯನ್ನು ಬ್ಲಾಕ್‌ ಮಾಡಿದ್ದಾರೆ. ಇದನ್ನು ತಾಳಲಾಗದೇ ಯುವಕ ಮಹಿಳೆಯ ಮೇಲೆ 13 ಬಾರಿ ಚಾಕುವಿನಿಂದ ಇರಿದಿದ್ದಾನೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

‘ಮಹಿಳೆಯು ನನ್ನ ಮೊಬೈಲ್‌ ಸಂಖ್ಯೆಯನ್ನು ಬ್ಲಾಕ್‌ ಮಾಡಿರುವುದನ್ನು ನನಗೆ ಸಹಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಮೂರು ದಿನ ನಿದ್ರೆ ಮಾಡಲು ಸಾಧ್ಯವಾಗದೆ, ಈ ರೀತಿ ಮಾಡಿರುವುದಾಗಿ ಆರೋಪಿ ಗೌರವ್‌ ಪಾಲ್‌ ವಿಚಾರಣೆ ವೇಳೆ ಹೇಳಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನ್ನ ಚಿಕ್ಕಪ್ಪ ಸೇರಿದಂತೆ ಇಬ್ಬರು ಸಂಬಂಧಿಕರು ಕಳೆದ ತಿಂಗಳು ಮದುವೆ ಪ್ರಸ್ತಾಪದೊಂದಿಗೆ ಮಹಿಳೆಯ ಕುಟುಂಬವನ್ನು ಭೇಟಿಯಾಗಿದ್ದರು. ಆದರೆ, ಮಹಿಳೆಯ ತಾಯಿ ಜಾತಿ ಕಾರಣ ನೀಡಿ ಪ್ರಸ್ತಾಪವನ್ನು ತಿರಸ್ಕರಿಸಿದರು ಎಂದು ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ.

ಮಹಿಳೆಯು ತನ್ನ ಕಚೇರಿಗೆ ಕ್ಯಾಬ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆದಿದ್ದು, ಕ್ಯಾಬ್‌ ಚಾಲಕ ಸ್ಥಳದಲ್ಲಿದ್ದ ಇತರರ ಸಹಾಯದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 307 (ಕೊಲೆ ಯತ್ನ) ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.