ADVERTISEMENT

ದೆಹಲಿ| ಕೋವಿಡ್ ಸೋಂಕು ಶಂಕಿತ ವ್ಯಕ್ತಿ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಪಿಟಿಐ
Published 19 ಮಾರ್ಚ್ 2020, 2:06 IST
Last Updated 19 ಮಾರ್ಚ್ 2020, 2:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್-19 ಸೋಂಕು ಶಂಕಿತ ವ್ಯಕ್ತಿಯೊಬ್ಬರು ದೆಹಲಿಯ ಸಫ್‌ದಾರ್‌ಜಂಗ್ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ವಿಮಾನ ನಿಲ್ದಾಣದ ಅಧಿಕೃತರು ಸೋಂಕು ಶಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತಂದಿದ್ದರು. ತಕ್ಷಣವೇ ಅವರನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಹೊತ್ತಿನಲ್ಲಿ ಆಸ್ಪತ್ರೆಯ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ವೈದ್ಯಕೀಯ ಪರೀಕ್ಷೆಗಾಗಿ ಮಾದರಿಗಳನ್ನು ತೆಗೆದುಕೊಂಡಿದ್ದು, ವರದಿಗಾಗಿ ಕಾಯುತ್ತಿದ್ದೆವು. ಐಸೋಲೇಷನ್ವಾರ್ಡ್‌ನ ಬಾಗಿಲು ತೆರೆಯುವಂತೆ ಒತ್ತಾಯಿಸಿದ ಅವರು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದದೆಹಲಿ ಉಪ ಪೊಲೀಸ್ ಆಯುಕ್ತರು (ನೈಋತ್ಯ)ಸಫ್‌ದಾರ್‌ಜಂಗ್ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ತನ್ವೀರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಸಿಡ್ನಿಯಿಂದ ವಾಪಸ್ ಆಗಿದ್ದು ಬುಧವಾರ ರಾತ್ರಿ 9 ಗಂಟೆಗೆ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.