ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ 39 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಬುಧವಾರ ದಕ್ಷಿಣ ಮುಂಬೈನಲ್ಲಿರುವ ಮುಖ್ಯಮಂತ್ರಿಯವರ ಅಧಿಕೃತ ನಿವಾಸ 'ವರ್ಷ'ದ ಹೊರಗೆ ವ್ಯಕ್ತಿ ಬಂದು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ, ಆದರೆ ಅಂತಹ ಯಾವುದೇ ಕೃತ್ಯಕ್ಕೆ ಮುಂದಾಗುವ ಮೊದಲೇ ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಆತನಿಂದ 100 ಮಿಲಿ ಪೆಟ್ರೋಲ್ ಬಾಟಲಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಆತ್ಮಹತ್ಯೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಸೋಲಾಪುರ ಜಿಲ್ಲೆಯ ನಿವಾಸಿ ಅಜಿತ್ ಮೈದಗಿ ಎಂದು ಗುರುತಿಸಲಾದೆ. ಅಜಿತ್ ಯಾವುದೋ ಕೆಲಸಕ್ಕಾಗಿ ರಾಜ್ಯದ ಇಲಾಖೆಯೊಂದರ ಕಚೇರಿಗೆ ಹೋಗಿದ್ದರು. ಕೆಲಸ ಆಗದಿದ್ದಾಗ ಅಸಮಾಧಾನಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಆ ವ್ಯಕ್ತಿಯನ್ನು ಮಲಬಾರ್ ಹಿಲ್ ಪೊಲೀಸ್ ಠಾಣೆಗೆ ಕರೆದೊಯ್ದು, ಪ್ರಕರಣ ದಾಖಲಿಸಲಾಯಿತು ಎಂದು ಅವರು ಹೇಳಿದ್ದಾರೆ.
ಪೊಲೀಸರು ಅವನಿಗೆ ಕೌನ್ಸೆಲಿಂಗ್ ಸಹ ಮನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.