ಲಖನೌ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋದ ವ್ಯಕ್ತಿಗೆ ಲಖನೌ ಟ್ರಾಫಿಕ್ ಪೊಲೀಸರು ₹6,300 ದಂಡ ವಿಧಿಸಿದ್ದಾರೆ.
ಸಿಎಎ ವಿರುದ್ಧ ನಡೆಸಿದ ಪ್ರತಿಭಟನೆಗಾಗಿ ಬಂಧಿತರಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಎಸ್.ಆರ್.ದರಪುರಿ ಅವರ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಶನಿವಾರ ಹೋಗುತ್ತಿದ್ದಾಗ ಪೊಲೀಸರು ಅವರನ್ನು ತಡೆದರು.
ಪೊಲೀಸರಿಗೆ ಸಡ್ಡು ಹೊಡೆದು ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಖಂಡ ಧೀರಜ್ ಗುಜ್ಜರ್ ಅವರ ದ್ವಿಚಕ್ರ ವಾಹನದಲ್ಲಿ ಅಧಿಕಾರಿಯ ಮನೆಗೆ ಹೋದರು. ಹೆಲ್ಮೆಟ್ ಇಲ್ಲದೆ ವಾಹನ ಚಲಾವಣೆ ಮಾಡಿದ್ದಕ್ಕಾಗಿ ಇಲ್ಲಿನ ಪೊಲೀಸರು ಧೀರಜ್ ಅವರಿಗೆ ದಂಡ ವಿಧಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.