ADVERTISEMENT

ಎರಡೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್ ಎನ್‌ಕೌಂಟರ್‌ನಲ್ಲಿ ಆರೋಪಿ ಸಾವು

ಪಿಟಿಐ
Published 6 ಜೂನ್ 2025, 5:25 IST
Last Updated 6 ಜೂನ್ 2025, 5:25 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಎರಡೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

26 ವರ್ಷದ ದೀಪಕ್ ವರ್ಮಾ ಮೃತ ಅತ್ಯಾಚಾರ ಆರೋಪಿ. ಈತನ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ಶುಕ್ರವಾರ ಮುಂಜಾನೆ ಅಲಂಬಾಗ್ ಪ್ರದೇಶದಲ್ಲಿ ಆರೋಪಿಯನ್ನು ಕೊಲ್ಲಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ ವಲಯ) ಆಶಿಶ್ ಶ್ರೀವಾಸ್ತವ ವರದಿಗಾರರಿಗೆ ತಿಳಿಸಿದರು.

ಮೆಟ್ರೊ ನಿಲ್ದಾಣದ ಅಡಿಯಲ್ಲಿ ವಾಸಿಸುವ ದಂಪತಿ ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಗುರುವಾರ ಅಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಅವರು ಹೇಳಿದರು.

"ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆಗಾಗಿ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇದರ ಜೊತೆಗೆ, ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನವನ್ನೂ ಘೋಷಿಸಲಾಗಿತ್ತು’ಎಂದು ಡಿಸಿಪಿ ಹೇಳಿದ್ದಾರೆ.

ಮೆಟ್ರೊ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗಿದೆ. ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಿಳಿ ಸ್ಕೂಟರ್‌ನಲ್ಲಿ ಒಬ್ಬ ವ್ಯಕ್ತಿ ಅಲ್ಲಿಗೆ ಬಂದಿರುವುದು ಕಂಡುಬಂದಿದೆ. ಆತ ಬಾಲಕಿಗಿಯನ್ನು ಮೆಟ್ರೊ ನಿಲ್ದಾಣದ ಲಿಫ್ಟ್ ಹಿಂದೆ ಕರೆದುಕೊಂಡು ಹೋಗಿ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಅವರು ತಿಳಿಸಿದ್ದಾರೆ..

ಗುರುವಾರ ಸಂಜೆ ಆರೋಪಿ ಇದ್ದ ಸ್ಥಳವನ್ನು ಪತ್ತೆ ಮಾಡಿದ ಪೊಲೀಸರು ಸ್ಥಳಕ್ಕೆ ತೆರಳಿ ಶರಣಾಗುವಂತೆ ಸೂಚಿಸಿದ್ದಾರೆ. ಬಳಿಕ, ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಆರೋಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬಾಲಕಿಯು ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.