ADVERTISEMENT

ಮನಮೋಹನ್‌ ಸಿಂಗ್‌ ಏಮ್ಸ್‌ಗೆ ದಾಖಲು

ಪಿಟಿಐ
Published 10 ಮೇ 2020, 18:44 IST
Last Updated 10 ಮೇ 2020, 18:44 IST
ಮನಮೋಹನ್ ಸಿಂಗ್‌
ಮನಮೋಹನ್ ಸಿಂಗ್‌   

ನವದೆಹಲಿ: ಹೃದ್ರೋಗ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮಾಜಿ ಪ‍್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಭಾನುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್‌) ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

87 ವರ್ಷದ ಅವರನ್ನು ರಾತ್ರಿ 8.45ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದ್ರೋಗ ತಜ್ಞ ಡಾ. ನಿತೀಶ್‌ ನಾಯ್ಕ್‌ ಅವರು ಸಿಂಗ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ2009ರಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ಆಗಿತ್ತು.

ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿರುವಅವರು, ಸದ್ಯ ರಾಜ್ಯಸಭೆಯಲ್ಲಿ ರಾಜಸ್ಥಾನವನ್ನು ಪ್ರತಿನಿಧಿಸುತ್ತಿದ್ದಾರೆ. 2004ರಿಂದ 2014ರ ಅವಧಿಯಲ್ಲಿ ಅವರು ಪ್ರಧಾನಿಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.