ADVERTISEMENT

ಆಮ್ಲಜನಕ ಕೊರತೆ ವಿಚಾರದಲ್ಲಿ ರಾಜಕೀಯ ನಿಲ್ಲಿಸಿ: ಮನ್‌ಸುಖ್‌ ಮಾಂಡವೀಯ

ಪಿಟಿಐ
Published 3 ಡಿಸೆಂಬರ್ 2021, 12:29 IST
Last Updated 3 ಡಿಸೆಂಬರ್ 2021, 12:29 IST
ಮನ್‌ಸುಖ್‌ ಮಾಂಡವೀಯ
ಮನ್‌ಸುಖ್‌ ಮಾಂಡವೀಯ   

ನವದೆಹಲಿ: ಕೋವಿಡ್‌ ಪಿಡುಗಿನ ಎರಡನೇ ಅಲೆ ಸಂದರ್ಭದಲ್ಲಿ ಎದುರಾದ ಆಮ್ಲಜನಕ ಕೊರತೆ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಶುಕ್ರವಾರ ಮನವಿ ಮಾಡಿದರು.

ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಆಮ್ಲಜನಕ ಕೊರತೆ ನೀಗಿಸಲು ಮತ್ತು ಬೇಡಿಕೆಗೆ ತಕ್ಕಷ್ಟು ಆಮ್ಲಜನಕ ಉತ್ಪಾದನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಗಮನ ಹರಿಸುವಂತೆ ಅವರು ತಿಳಿಸಿದರು.

‘ದುಃಖದ ಸಂಗತಿಯೆಂದರೆ, ಇಂತಹ ಪರಿಸ್ಥಿತಿಯಲ್ಲಿಯೂ ಅನೇಕರು ರಾಜಕೀಯ ಮಾಡುವುದನ್ನು ನಿಲ್ಲಿಸಿಲ್ಲ. ಈ ನಿಟ್ಟಿನಲ್ಲಿ ನಾವು ನಡೆಸಿರುವ ಪ್ರಾಮಾಣಿಕ ಪ್ರಯತ್ನಗಳನ್ನು ಗಮನಿಸಿ. ಇದು ರಾಜಕೀಯದ ವಿಷಯವಲ್ಲ’ ಎಂದು ಅವರು ಉತ್ತರಿಸಿದರು.

ADVERTISEMENT

ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಬಗ್ಗೆ ವಿರೋಧ ಪಕ್ಷಗಳು ಪ್ರಶ್ನಿಸಿದಾಗ, ಈ ಸಂಬಂಧ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಂದ ದತ್ತಾಂಶಗಳನ್ನು ಪಡೆದುಕೊಂಡಿದೆ. ಪಂಜಾಬ್‌ ಸರ್ಕಾರ ಮಾತ್ರ ಆಮ್ಲಜನಕ ಕೊರತೆಯಿಂದ ನಾಲ್ಕು ಸಾವುಗಳು ಸಂಭವಿಸಿದ ಶಂಕೆ ವ್ಯಕ್ತಪಡಿಸಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳ ಮಾಹಿತಿಯನ್ನು ಮುಚ್ಚಿಡುವುದಿಲ್ಲ ಎಂದು ಸ್ವತಃ ಪ್ರಧಾನಿ ಅವರೇ ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.