ADVERTISEMENT

ಕೇಂದ್ರದಿಂದ ಕರ್ನಾಟಕ ಸೇರಿ ಎಂಟು ರಾಜ್ಯಗಳ ಕೋವಿಡ್ ಸ್ಥಿತಿಗತಿ ಪರಿಶೀಲನೆ

ಪಿಟಿಐ
Published 28 ಜನವರಿ 2022, 3:03 IST
Last Updated 28 ಜನವರಿ 2022, 3:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕ ಸೇರಿದಂತೆ ಎಂಟು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಕೋವಿಡ್ ನಿರ್ವಹಣಾ ಸ್ಥಿತಿಗತಿ ಕುರಿತು ಇಂದು (ಜ.28, ಶುಕ್ರವಾರ) ಕೇಂದ್ರ ಸರ್ಕಾರವು ಪರಿಶೀಲಿಸಲಿದೆ.

ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮತ್ತು ಸಾರ್ವಜನಿಕ ಆರೋಗ್ಯ ಸಿದ್ಧತೆ ಕುರಿತು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಶುಕ್ರವಾರ ಪರಿಶೀಲನೆ ನಡೆಸಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 2.30ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಿಗದಿಯಾಗಿದೆ.

ಭಾರತದಲ್ಲಿ ಓಮೈಕ್ರಾನ್ ಸಮುದಾಯ ಪ್ರಸರಣ ಹಂತದಲ್ಲಿದ್ದು, ಮೆಟ್ರೊ ನಗರಗಳಲ್ಲಿ ಹೊಸ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ.

ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಜಿನೋಮ್ ಸೀಕ್ವೆನ್ಸಿಂಗ್‌ನಲ್ಲಿ ಶೇ 75ರಷ್ಟು ಓಮೈಕ್ರಾನ್ ಸೋಂಕು ಇರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್ ಪರಿಣಾಮಕಾರಿ ನಿರ್ವಹಣೆಗಾಗಿ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಕುರಿತು ಅವಲೋಕನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.