ADVERTISEMENT

ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ.ಮಾಣಿಕ್ ಪ್ರಮಾಣವಚನ ಸ್ವೀಕಾರ

ಪಿಟಿಐ
Published 15 ಮೇ 2022, 13:45 IST
Last Updated 15 ಮೇ 2022, 13:45 IST
ಮಾಣಿಕ್ ಸಾಹಾ
ಮಾಣಿಕ್ ಸಾಹಾ   

ಅಗರ್ತಲಾ: ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಅಲ್ಲಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಾ.ಮಾಣಿಕ್ ಸಾಹಾ ಅವರು ಭಾನುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು.

ಇಲ್ಲಿನ ರಾಜಭವನದಲ್ಲಿ ಸಾಹಾ ಅವರಿಗೆ ರಾಜ್ಯಪಾಲ ಎಸ್‌.ಎನ್.ಆರ್ಯ ಪ್ರಮಾಣವಚನ ಬೋಧಿಸಿದರು. ತ್ರಿಪುರಾದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶನಿವಾರ ಸಂಜೆ ಬಿಪ್ಲಬ್ ದೇಬ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ನಡೆದ ತುರ್ತುಸಭೆಯಲ್ಲಿ ಮಾಣಿಕ್ ಸಾಹಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ದಂತವೈದ್ಯರಾಗಿರುವ ಸಾಹಾ 2016ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. 2020ರಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕವಾಗಿದ್ದರು. ಈ ವರ್ಷ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಕಾರ್ಯಸೂಚಿಯ ಮೇರೆಗೆ ತ್ರಿಪುರಾದ ಜನರಿಗಾಗಿ ಕೆಲಸ ಮಾಡುತ್ತೇನೆ’ ಎಂದು ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಮಾಣಿಕ್ ಸಾಹಾ ಹೇಳಿದ್ದಾರೆ.

ಬಹಿಷ್ಕಾರ: ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ಫ್ಯಾಸಿಸ್ಟ್ ಧೋರಣೆಯ ಹಿಂಸಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಸಿಪಿಎಂ ಶಾಸಕರು ಪ್ರಮಾಣವಚನ ಸಮಾರಂಭವನ್ನು ಬಹಿಷ್ಕರಿಸಿದರು.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಗೆಲುವು ಸಾಧಿಸುವ ತಂತ್ರದ ಭಾಗವಾಗಿ ಸಾಹಾ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.