ADVERTISEMENT

ಮಣಿಪುರ | ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ: 9 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 15:28 IST
Last Updated 1 ಆಗಸ್ಟ್ 2024, 15:28 IST
ಇಂಫಾಲ್‌ನ ನಿರಾಶ್ರಿತ ಶಿಬಿರಗಳಲ್ಲಿ ನೆಲೆಸಿರುವ ಜನರು ಶಾಂತಿ ಸ್ಥಾಪನೆ ಮತ್ತು ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದರು –ರಾಯಿಟರ್ಸ್‌ ಚಿತ್ರ
ಇಂಫಾಲ್‌ನ ನಿರಾಶ್ರಿತ ಶಿಬಿರಗಳಲ್ಲಿ ನೆಲೆಸಿರುವ ಜನರು ಶಾಂತಿ ಸ್ಥಾಪನೆ ಮತ್ತು ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದರು –ರಾಯಿಟರ್ಸ್‌ ಚಿತ್ರ   

ಗುವಾಹಟಿ: ಜನಾಂಗೀಯ ಸಂಘರ್ಷ ಪೀಡಿತ ರಾಜ್ಯ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುರುವಾರ ಅಶ್ರುವಾಯು ಶೆಲ್‌ ದಾಳಿ ನಡೆಸಿದ್ದಾರೆ. ಇದರಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಎಂಟು ಜನರು ಮತ್ತು ವಿಡಿಯೊ ಪತ್ರಕರ್ತರೊಬ್ಬರು ಗಾಯಗೊಂಡಿದ್ದಾರೆ. 

ಇಂಫಾಲ್‌ನ ಅಖಂಪತ್‌ ಪ್ರದೇಶದಲ್ಲಿನ ಪರಿಹಾರ ಶಿಬಿರದ ಕಡೆಯಿಂದ ಪ್ರತಿಭಟನಾ ಮೆರವಣಿಗೆ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರ ಅಧಿಕೃತ ನಿವಾಸದ ಕಡೆಗೆ ಸಾಗಿದಾಗ, ಪೊಲೀಸರು ಅಶ್ರುವಾಯು ಶೆಲ್‌ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ.  

ಶಾಂತಿ ಮರುಸ್ಥಾಪನೆಗೆ ಒತ್ತಾಯಿಸಿದ ಪ್ರತಿಭಟನಕಾರರು, ತೆಂಗ್‌ನೌಪಾಲ್‌ ಮತ್ತು ಚುರಾಚಂದಪುರ ಜಿಲ್ಲೆಯ ಕುಕಿ ಪ್ರಾಬಲ್ಯದ ಪ್ರದೇಶದಲ್ಲಿನ ತಮ್ಮ ನಿವಾಸಗಳಿಗೆ ತೆರಳಲು ಅವಕಾಶ ಮಾಡಿಕೊಡುವಂತೆ ಆಗ್ರಹಿಸಿದರು. ಕಳೆದ ವರ್ಷದ ಮೇ 3ರಂದು ಹಿಂಸಾಚಾರ ಭುಗಿಲೆದ್ದ ಬಳಿಕ, ಆ ಪ್ರದೇಶಗಳಲ್ಲಿನ ಜನರು ಮೈತೇಯಿ ಪ್ರಾಬಲ್ಯದ ಇಂಫಾಲ್‌ನಲ್ಲಿ ಆಶ್ರಯ ಪಡೆದಿದ್ದಾರೆ.

ADVERTISEMENT

ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.