
ಪಿಟಿಐ
ನವದೆಹಲಿ: ಮಣಿಪುರದಲ್ಲಿ ಚುನಾವಣೆ ನಡೆಸಲು ವಿರೋಧ ಪಕ್ಷಗಳ ಸಂಸದರು ಬುಧವಾರ ಒತ್ತಾಯಿಸಿದರು. ಜಲ (ಮಾಲಿನ್ಯ ತಡೆ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2024ಯನ್ನು ಮಣಿಪುರಕ್ಕೂ ವಿಸ್ತರಿಸುವ ಕುರಿತು ರಾಜ್ಯಸಭೆಯಲ್ಲಿ ನಿರ್ಣಯ ಮಂಡಿಸಿದ ಬೆನ್ನಲ್ಲೇ ಸಂಸದರು ಹೀಗೆ ಒತ್ತಾಯಿಸಿದರು.
‘ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇರುವುದರಿಂದ ಎರಡೂ ಸದನಗಳು ಈ ನಿರ್ಣಯವನ್ನು ಅಂಗೀಕರಿಸಬೇಕಿದೆ’ ಎಂದು ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಹೇಳಿದರು. ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ಟಿಎಂಸಿ ಸಂಸದೆ ಸುಶ್ಮಿತಾ ದೇವ್, ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.