ADVERTISEMENT

ಮಣಿಪುರ: ಭದ್ರತಾ ಸ್ಥಿತಿ ಪರಿಶೀಲಿಸಿದ ರಾಜ್ಯಪಾಲ

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 14:02 IST
Last Updated 4 ಜನವರಿ 2025, 14:02 IST
ಮಣಿಪುರ ರಾಜ್ಯಪಾಲ ಅಜಯ್ ಕುಮಾರ್‌ ಭಲ್ಲಾ ಅವರು ರಾಜಭವನದಲ್ಲಿ  ಪೊಲೀಸ್‌, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಅಸ್ಸಾಂ ರೈಫಲ್ಸ್‌ನ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು –ಪಿಟಿಐ ಚಿತ್ರ 
ಮಣಿಪುರ ರಾಜ್ಯಪಾಲ ಅಜಯ್ ಕುಮಾರ್‌ ಭಲ್ಲಾ ಅವರು ರಾಜಭವನದಲ್ಲಿ  ಪೊಲೀಸ್‌, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಅಸ್ಸಾಂ ರೈಫಲ್ಸ್‌ನ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು –ಪಿಟಿಐ ಚಿತ್ರ    

ಇಂಫಾಲ್‌: ಮಣಿಪುರ ರಾಜ್ಯಪಾಲ ಅಜಯ್ ಕುಮಾರ್‌ ಭಲ್ಲಾ ಅವರು ರಾಜಭವನದಲ್ಲಿ ಪೊಲೀಸ್‌, ಸಿಆರ್‌ಪಿಎಫ್‌, ಬಿಎಸ್‌ಎಫ್‌, ಅಸ್ಸಾಂ ರೈಫಲ್ಸ್‌ನ ಹಿರಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು. ರಾಜ್ಯದ ಭದ್ರತಾ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದರು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ಭದ್ರತಾ ಪರಿಕರಗಳು ಮತ್ತು ಅವುಗಳ ನಿಯೋಜನೆಯನ್ನು ಪರಿಶೀಲಿಸಿದರು’ ಎಂದು ಹೇಳಿಕೆ ತಿಳಿಸಿದೆ.

ರಾಜ್ಯದ ಜನರ ಸುರಕ್ಷತೆ ಮತ್ತು ರಕ್ಷಣೆಗೆ ಆದ್ಯತೆ ನೀಡಬೇಕೆಂದು ಡಿಜಿಪಿ ಅವರಿಗೆ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಸೇನೆ ಮತ್ತು ಅರೆಸೇನಾ ಪಡೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ADVERTISEMENT

ಸರ್ಕಾರದ ಭದ್ರತಾ ಸಲಹೆಗಾರ ಕುಲದೀಪ್‌ ಸಿಂಗ್‌, ಡಿಜಿಪಿ ರಾಜೀವ್‌ ಸಿಂಗ್‌, ಐಜಿಎಆರ್‌ (ದಕ್ಷಿಣ) ಮೇಜರ್‌ ಜನರಲ್‌ ರಾವ್‌ರೂಪ್‌ ಸಿಂಗ್‌ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

‘ಹೊಣೆಯಿಂದ ತಪ್ಪಿಸಿಕೊಳ್ಳಲಾಗದು’

ನವದೆಹಲಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಟೀಕಾಪ್ರಹಾರ ನಡೆಸಿರುವ ಕಾಂಗ್ರೆಸ್, ರಾಜಧರ್ಮವನ್ನು ಪಾಲಿಸದ ಸಾಂವಿಧಾನಿಕ ಹೊಣೆಗಾರಿಕೆಯಿಂದ ಅವರು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದೆ.

ಮಣಿಪುರದಲ್ಲಿ ಸಂಘರ್ಷ ಮುಂದುವರಿಯುವಂತೆ ನೋಡಿಕೊಳ್ಳುವಲ್ಲಿ ಬಿಜೆಪಿಗೆ ಸ್ವಹಿತಾಸಕ್ತಿ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.