ಮಣಿಪುರ ಜನಾಂಗೀಯ ಸಂಘರ್ಷ
ಪಿಟಿಐ ಚಿತ್ರ
ಇಂಫಾಲ: ಮಣಿಪುರದ ಚುರ್‌ಚಾಂದ್‌ಪುರ ಜಿಲ್ಲೆಯಲ್ಲಿ ಕುಕಿ ಸಮುದಾಯದ ನಾಯಕನ ಮನೆಗೆ ಗುಂಪೊಂದು ಬೆಂಕಿ ಹಚ್ಚಿದ್ದು, ಮತ್ತೆ ಉದ್ವಿಗ್ನತೆ ಭುಗಿಲೆದ್ದಿದೆ.
ಭಾನುವಾರ ರಾತ್ರಿ ಕುಕಿ ರಾಷ್ಟ್ರೀಯ ಸಂಸ್ಥೆಯ ನಾಯಕ ಕೆಲ್ವಿನ್ ಐಖೆಂಥಾಂಗ್ ಎನ್ನುವವರ ಮನೆಗೆ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಕೆಲವು ಸ್ಥಳೀಯರು ಶಾರ್ಟ್‌ಸರ್ಕೀಟ್‌ನಿಂದ ಮನೆಗೆ ಬೆಂಕಿ ತಗುಲಿದೆ ಎಂದಿದ್ದಾರೆ.
ಮಣಿಪುರದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆ ಸ್ಥಾಪಿಸುವುದೂ ಸೇರಿದಂತೆ ಹಲವು ನಿಯಮಗಳ ಕುರಿತ ಒಪ್ಪಂದಕ್ಕೆ ಸರ್ಕಾರ ಹಾಗೂ ಎರಡು ಪ್ರಮುಖ ಕುಕಿ ಸಂಘಟನೆಗಳು ಸೆ.4ರಂದು ಸಹಿ ಹಾಕಿದ್ದವು.
ಕುಕಿ ರಾಷ್ಟ್ರೀಯ ಸಂಘಟಣೆ (ಕೆಎನ್‌ಒ) ಮತ್ತು ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಕಾರ್ಯಾಚರಣೆ ನಿಗ್ರಹ (ಎಸ್‌ಒಒ) ಒಪ್ಪಂದಕ್ಕೆ ಸಹಿ ಹಾಕಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.