ಇಂಫಾಲ (ಮಣಿಪುರ): ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಗಳ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನಿಷೇಧಿತ ಸಂಘಟನೆ ಝೆಲಿಯಾಂಗ್‌ರಾಂಗ್ ಯುನೈಟೆಡ್ ಫ್ರಂಟ್‌ನ (ಜೆ) ಸ್ವಯಂ ಘೋಷಿತ ಉಪ ಮುಖ್ಯಸ್ಥ ನಮ್‌ಗಕ್ಲುಂಗ್ ಕಮೇ (42) ಅವರನ್ನು ಪಶ್ಚಿಮ ಇಂಫಾಲದ ಕೆಕೃಪತ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ನಿಷೇಧಿತ ಸಂಘಟನೆಯಾದ ಕೆವೈಕೆಎಲ್‌ನ (ಸೊರೆಪಾ) ಉಗ್ರನನ್ನು ಪೂರ್ವ ಇಂಫಾಲ ಜಿಲ್ಲೆಯ ಆಂಡ್ರೊ ಖುಮಾನ್‌ನಲ್ಲಿ ಬಂಧಿಸಲಾಗಿದೆ. ನಿಷೇಧಿತ ಸಂಘಟನೆಯಾದ ಕೆಸಿಪಿ (ಪಿಡಬ್ಲ್ಯೂಜಿ) ಉಗ್ರನನ್ನು ಖುರೈ ಚೈತಾಬಿ ಲೀರಾಕ್‌ನಿಂದ ಹಾಗೂ ಖುರೈ ಕೊಂಗ್‌ಖಾಮ್ ಲೈಕೈನಿಂದ ಮತ್ತೊಬ್ಬ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ 9 ಎಂಎಂ ಪಿಸ್ತೂಲ್‌ಗಳು, ಮ್ಯಾಗಜೀನ್, ರೈಫಲ್‌ಗಳು, ಗ್ರೆನೇಡ್‌ಗಳು, ಮದ್ದುಗುಂಡುಗಳನ್ನು ಸೇರಿದಂತೆ ಶಸ್ತಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.