ಏಳು ಜನರ ಬಂಧನ
ಇಂಫಾಲ್: ಭದ್ರತಾ ಪಡೆಗಳು ಮಣಿಪುರದ ವಿವಿಧ ಜಿಲ್ಲೆಗಳಿಂದ ಏಳು ಉಗ್ರರನ್ನು ಬಂಧಿಸಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕೆಸಿಪಿ ಸಂಘಟನೆಗೆ ಸೇರಿದ ಮತ್ತು ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ಉಗ್ರರನ್ನು ಶುಕ್ರವಾರ ರಾತ್ರಿ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ನಿಷೇಧಿತ ಪ್ರೆಪಾಕ್ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಬಂಧಿಸಲಾಗಿದೆ.
ಏತನ್ಮಧ್ಯೆ, ಎರಡು ಪಿಸ್ತೂಲ್‌ಗಳು, ನಾಲ್ಕು ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದೊಂದು ತಿಂಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ 100ಕ್ಕೂ ಹೆಚ್ಚು ಉಗ್ರರನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.