ಇಂಫಾಲ್: ತೆಂಗನೌಪಾಲ್ ಮತ್ತು ತೌಬಲ್ ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ 6 ಮಂದಿ ಉಗ್ರರನ್ನು ಬಂಧಿಸಲಾಗಿದೆ ಎಂದು ಸೋಮವಾರ ಮಣಿಪುರ ಪೊಲೀಸರು ತಿಳಿಸಿದ್ದಾರೆ.
ಪೀಪಲ್ಸ್ ಲಿಬರೇಷನ್ ಆರ್ಮಿ, ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಕೆ), ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಾರ್ಟಿಗೆ ಸೇರಿದ ನಾಲ್ವರು, ಕೆಸಿಪಿಗೆ ಸೇರಿದ ಇಬ್ಬರನ್ನು ಸುಲಿಗೆ ಮತ್ತು ತಮ್ಮ ಸಂಘಟನೆಗಳಿಗೆ ಯುವಕರನ್ನು ನೇಮಿಸಿಕೊಳ್ಳುತ್ತಿರುವ ಆರೋಪದ ಮೇಲೆ ಬಂಧಿಸಲಾಗಿದೆ.
ಮತ್ತೊಂದೆಡೆ, ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಭದ್ರತಾ ಪಡೆಯವರು ಭಾನುವಾರ ಬಂದೂಕು, ಪಿಸ್ತೂಲ್, ಕಚ್ಚಾಬಾಂಬ್ ಸೇರಿ ಹಲವು ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನೂ ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.