
ಪಿಟಿಐ
ಇಂಫಾಲ: ಮಣಿಪುರದ ಪೂರ್ವ ಇಂಫಾಲ ಜಿಲ್ಲೆಯಲ್ಲಿ, ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಸದಸ್ಯರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.
ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿಯ ಇಬ್ಬರು ಸದಸ್ಯರನ್ನು ಜಿಲ್ಲೆಯ ಪ್ಯಾಲೆಸ್ ಗೇಟ್ ಬಳಿ ಹಾಗೂ ಪ್ರಿಪಾಕ್ ಸಂಘಟನೆಯ ಒಬ್ಬ ಸದಸ್ಯನನ್ನು ನೊಂಗದದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಟೆಂಗ್‌ನೌಪಾಲ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುರಾಚಂದ್‌ಪುರದಲ್ಲಿ 36 ಕೆ.ಜಿಗಿಂತ ಅಧಿಕ ತೂಕದ ಅಫೀಮನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.