
ಪಿಟಿಐ
ಬಂಧನ (ಸಾಂದರ್ಭಿಕ ಚಿತ್ರ)
ಇಂಫಾಲ: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ್ದ 7 ಮಂದಿ ಬಂಡುಕೋರರನ್ನು ಮಣಿಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು. ಪೂರ್ವ ಇಂಫಾಲ, ಪಶ್ಚಿಮ ಇಂಫಾಲ, ಬಿಷ್ಣುಪುರ ಹಾಗೂ ಕಾಕ್‌ಚಿಂಗ್ ಜಿಲ್ಲೆಗಳಲ್ಲಿ ಬಂಡುಕೋರರನ್ನು ಬಂಧಿಸಲಾಗಿದೆ.
ನಿಷೇಧಿತ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್‌ಎ) ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು, ಭದ್ರತಾ ಸಿಬ್ಬಂದಿ ಪಶ್ಚಿಮ ಇಂಫಾಲ ಜಿಲ್ಲೆಯಲ್ಲಿ ಶನಿವಾರ ಬಂಧಿಸಿದರು. ಬಂಧಿತರಿಂದ 32 ಪಿಸ್ತೂಲು ಹಾಗೂ ಐಇಡಿ (ಕಚ್ಚಾ ಬಾಂಬ್) ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಯಿತು.
ಕಾನೂನು ಎದುರು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕ ಹಾಗೂ ಇಬ್ಬರು ಪಿಎಲ್‌ಎ ಕಾರ್ಯಕರ್ತರು ಸೇರಿದಂತೆ ಮೂವರನ್ನು ಶುಕ್ರವಾರ ಬಂಧಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.