ಇಂಫಾಲ: ಮಣಿಪುರದಲ್ಲಿ ಮೂರು ನಿಷೇಧಿತ ಉಗ್ರ ಸಂಘಟನೆಗಳ ಐವರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ.
ಪೀಪಲ್ಸ್ ಲಿಬರೇಷನ್ ಆರ್ಮಿಯ ಒಬ್ಬ ಸಕ್ರಿಯ ಕಾರ್ಯಕರ್ತನನ್ನು ತೌಬಾಲ್ ಜಿಲ್ಲೆಯ ಲೀರೊಂಗ್ಥೆಲ್ ಪಿತ್ರಾದಲ್ಲಿ ಸೋಮವಾರ ಬಂಧಿಸಲಾಗಿದೆ. ಈತ ತೌಬಾಲ್ ಜಿಲ್ಲೆಯಲ್ಲಿ ಉಗ್ರರ ನೇಮಕಾತಿ ಹಾಗೂ ಸುಲಿಗೆಯಲ್ಲಿ ತೊಡಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ತಾಂಗಲ್ ಬಜಾರ್‌ನಲ್ಲಿ ನಿಷೇಧಿತ ಕೆಸಿಪಿ (ಎಂಎಫ್‌ಎಲ್) ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಇವರು ಕಣಿವೆ ಪ್ರದೇಶದ ವ್ಯಾಪಾರಿಗಳು ಹಾಗೂ ಅಂಗಡಿಗಳ ಮಾಲೀಕರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದಾಗ ಕಾಂಗ್ಲೆಯಿ ಯವೊಲ್ ಕನ್ನಾ ಲುಪ್ (ಕೆವೈಕೆಎಲ್) ಸಂಘಟನೆಯ ಇಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಸಿಂಗ್ಜಮೆಯಿ ಚಿಂಗಮಖೋಂಗ್ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಒಂದು 7.65 ಎಂ.ಎಂ. ಪಿಸ್ತೂಲ್ ಹಾಗೂ ಮೂರು ಸುತ್ತಿನ ಮದ್ದುಗುಂಡುಗಳನ್ನು ಜಪ್ತಿ ಮಾಡಲಾಗಿದೆ. ನವೋಡಖೋಂಗ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.