
ಇಂಫಾಲ: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಬಂಡುಕೋರರನ್ನು ಭದ್ರತಾ ಪಡೆ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದರು.
ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿಯ ಒಬ್ಬ ಕಾರ್ಯಕರ್ತನನ್ನು ಪೂರ್ವ ಇಂಫಾಲ ಜಿಲ್ಲೆಯ ಕೊಂಗ್ಪಾಲ್ ಚಿಂಗಾಂಗ್‌ಬಾಮ್‌ನಲ್ಲಿ ಹಾಗೂ ಪ್ರಿಪಾಕ್ ಸಂಘಟನೆ ಒಬ್ಬ ಕಾರ್ಯಕರ್ತನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಅಂಬೋಯಿಖೊಂಗ್‌ನಾಂಗ್‌ಖೊಂಗ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಪೀಪಲ್ಸ್ ಲಿಬರೇಷನ್ ಗೆರಿಲ್ಲಾ ಆರ್ಮಿಯ ಮತ್ತೊಬ್ಬ ಬಂಡುಕೋರನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ನಗರಮ್ ಪ್ರದೇಶದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ತೌಬಾಲ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ.
ಪೂರ್ವ ಇಂಫಾಲದಲ್ಲಿಯೂ ಹ್ಯಾಂಡ್ ಗ್ರೆನೇಡ್ ಮತ್ತು ಬಾಂಬ್‌ಗಳು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.