ಬಂಧನ
ಇಂಫಾಲ( ಮಣಿಪುರ): ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮಹಿಳೆ ಸೇರಿದಂತೆ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಇಂಫಾಲ ಪಶ್ಚಿಮ ಜಿಲ್ಲೆಯ ಹಾವೊಬಮ್ ಮರಕ್ ಪ್ರದೇಶದಲ್ಲಿ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಮಹಿಳಾ ಕೇಡರ್ ಅನ್ನು ಗುರುವಾರ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕೆ ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಳು. ಅಲ್ಲದೇ ಇಂಫಾಲ ಪ್ರದೇಶದ ಅಧಿಕಾರಿಗಳು ಮತ್ತು ಕೊರಿಯರ್ ಸೇವಾ ನಿರ್ವಾಹಕರಿಗೆ ಬೆದರಿಕೆ ಹಾಕಿದ್ದಳು ಎಂದು ಅವರು ಹೇಳಿದ್ದಾರೆ.
ಕಣಿವೆ ಪ್ರದೇಶಗಳಲ್ಲಿ ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ನಿಷೇಧಿತ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ (ಪಿಡಬ್ಲ್ಯುಜಿ)ಸಕ್ರಿಯ ಕಾರ್ಯಕರ್ತನನ್ನು ಇಂಫಾಲ ಪಶ್ಚಿಮ ಜಿಲ್ಲೆಯ ಸಮುರೌದಲ್ಲಿ ಗುರುವಾರ ಬಂಧಿಸಲಾಗಿದೆ. ಆತನಿಂದ ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂದೂಕು ಬಳಸಿ ಜನರನ್ನು ಬೆದರಿಸಿದ್ದ ಆರೋಪದ ಮೇಲೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆತನಿಂದ ಒಂದು ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.