ADVERTISEMENT

ಮಣಿಪುರ | ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಸಾವು: ಸ್ಥಳೀಯರ ‍ಪ್ರತಿಭಟನೆ

ಪಿಟಿಐ
Published 20 ಸೆಪ್ಟೆಂಬರ್ 2025, 14:45 IST
Last Updated 20 ಸೆಪ್ಟೆಂಬರ್ 2025, 14:45 IST
<div class="paragraphs"><p>ಮಣಿಪುರದ ಬಿಷ್ಣುಪುರ ಜಿಲ್ಲೆಯ ನಂಬೊಲ್‌ನಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್‌ ಸಿಬ್ಬಂದಿಯನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಗಾಯಗೊಂಡವರನ್ನು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ಶುಕ್ರವಾರ ಭೇಟಿಯಾದರು</p></div>

ಮಣಿಪುರದ ಬಿಷ್ಣುಪುರ ಜಿಲ್ಲೆಯ ನಂಬೊಲ್‌ನಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್‌ ಸಿಬ್ಬಂದಿಯನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಗಾಯಗೊಂಡವರನ್ನು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ಶುಕ್ರವಾರ ಭೇಟಿಯಾದರು

   

–ಪಿಟಿಐ ಚಿತ್ರ

ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯ ನಂಬೊಲ್‌ನಲ್ಲಿ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಸಾವಿಗೆ ಕಾರಣವಾದ ದಾಳಿಯನ್ನು ಖಂಡಿಸಿ ಸ್ಥಳೀಯರು ಶನಿವಾರ ಪ್ರತಿಭಟನೆ ನಡೆಸಿದರು.

ADVERTISEMENT

ಶುಕ್ರವಾರ ಸಂಜೆ ನಂಬೊಲ್‌ ಸಬಲ್‌ ಲೈಕೈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಅಸ್ಸಾಂ ರೈಫಲ್ಸ್‌ ಪಡೆಯ ವಾಹನದ ಮೇಲೆ ದಾಳಿ ನಡೆಸಿತು. ಈ ವೇಳೆ ಇಬ್ಬರು ಯೋಧರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.

ಈವರೆಗೆ ಯಾವುದೇ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. 

ದಾಳಿಯನ್ನು ಖಂಡಿಸಿ ಮಹಿಳೆಯರು ಪ್ರತಿಭಟನಾ ರ್‍ಯಾಲಿ ನಡೆಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಗುಂಡು ಹಾರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.