ಬಂಧನ
ಇಂಫಾಲ್: ವಿವಿಧ ನಿಷೇಧಿತ ಸಂಘಟನೆಗಳ ಮೂವರು ಮತ್ತು ಒಬ್ಬ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಿಆರ್‌ಇಪಿಎಕೆ ಸಂಘಟನೆಯ ಇಬ್ಬರು ಉಗ್ರರನ್ನು ವಿಷ್ಣುಪುರ ಜಿಲ್ಲೆಯಲ್ಲಿ ಮತ್ತು ಪೀಪಲ್ಸ್ ಲಿಬರೇಷನ್ ಆರ್ಮಿ ಸಂಘಟನೆಯ ಒಬ್ಬ ಉಗ್ರನನ್ನು ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ‘ಸಾರ್ವಜನಿಕರಿಂದ, ಸ್ಥಳೀಯ ವ್ಯಾಪಾರಿಗಳಿಂದ ಇವರು ಹಣ ಸುಲಿಗೆ ಮಾಡುತ್ತಿದ್ದರು’ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಶಸ್ತ್ರಾಸ್ತ್ರಗಳನ್ನು ವ್ಯಾಪಾರ ಮಾಡುವ 33 ವರ್ಷದ ವ್ಯಕ್ತಿಯನ್ನು ಪಶ್ಚಿಮ ಇಂಫಾಲ್ ಜಿಲ್ಲೆಯಲ್ಲಿ ಆತನ ಮನೆಯಲ್ಲಿಯೇ ಬಂಧಿಸಲಾಗಿದೆ. ಈತನಿಂದ ಸೆಲ್ಫ್ ಲೋಡಿಂಗ್ ರೈಫಲ್, ಎರಡು ಮ್ಯಾಗಜಿನ್ ಮತ್ತು 96 ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.