
ಪಿಟಿಐ
ಇಂಫಾಲ್: ಮಣಿಪುರದ ಚುರಾಚಾಂದಪುರ ಜಿಲ್ಲೆಯಲ್ಲಿ ಶಂಕಿತ ಕುಕಿ ಸಮುದಾಯದವರಿಂದ ಹತ್ಯೆಯಾದ ಮೈತೇಯಿ ಸಮುದಾಯದ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರ ಶುಕ್ರವಾರ ₹10 ಲಕ್ಷ ಪರಿಹಾರ ಘೋಷಿಸಿದೆ.
ಮಯಾಂಗ್ಲಂಬಮ್ ರಿಷಿಕಾಂತ ಸಿಂಗ್ ಹತ್ಯೆಯಾದ ವ್ಯಕ್ತಿ. ಜ. 21ರಂದು ಚುರಾಚಾಂದಪುರ ಜಿಲ್ಲೆಯ ಟುಯಿಬಾಂಗ್ ಪ್ರದೇಶದಲ್ಲಿನ ಮನೆಯಿಂದ ರಿಷಿಕಾಂತ ದಂಪತಿಯನ್ನು ಅಪಹರಿಸಿದ್ದ ಬಂಡುಕೋರರು ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಸಿಂಗ್ ಪತ್ನಿ ಕುಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಅವರಿಗೆ ಯಾವುದೇ ತೊಂದರೆ ಮಾಡದೆ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವುದಾಗಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.