ಕೇಂದ್ರ ಗೃಹ ಸಚಿವ ಅಮಿತ್ ಶಾ
–ಪಿಟಿಐ ಚಿತ್ರ
ನವದೆಹಲಿ: ಜನಾಂಗೀಯ ಸಂಘರ್ಷದ ಮಣಿಪುರದಲ್ಲಿ ಪರಿಸ್ಥಿತಿ ನಿರ್ವಹಿಸುವಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ.
2022ರಲ್ಲಿ ಬಿಜೆಪಿ ಮಣಿಪುರದಲ್ಲಿ ಭಾರಿ ಜನಾದೇಶದೊಂದಿಗೆ ಸರ್ಕಾರ ರಚನೆ ಮಾಡಿತು. ಆದರೆ ಜನಾಂಗೀಯ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿ ಅಧಿಕಾರದಿಂದ ದೂರ ಸರಿಯಿತು ಎಂದರು.
ನಮ್ಮದು ಡಬಲ್ ಎಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿಗೆ, ಮಣಿಪುರ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ, ರಾಜ್ಯದಲ್ಲಿ ಸಾಂವಿಧಾನಿಕ ಆಡಳಿತ ಸ್ಥಗಿತಗೊಂಡಿದ್ದು ಜನರು ಅಸಹಾಯಕರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ ಸ್ಥಾಪಿಸಿ, ರಾಜ್ಯವನ್ನು ಸಹಜಸ್ಥಿತಿಗೆ ತರಲು ಬಿಜೆಪಿಯಿಂದ ಸಾಧ್ಯವಾಗಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ನಿರ್ಲಕ್ಷಿಸುವುದನ್ನು ಮುಂದುವರೆಸಿದ್ದಾರೆ. ವಿದೇಶ ಸುತ್ತುವ ಅವರಿಗೆ ಇದುವರೆಗೂ ರಾಜ್ಯಕ್ಕೆ ಭೇಟಿ ಕೊಡಲು ಸಾಧ್ಯವಾಗಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.